Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021- 23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಅವಿರೋಧವಾಗಿ ಆಯ್ಕೆಯಾದರು.

ನಗರದ ಐಎಂಎ ಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಉಪಾಧ್ಯಕ್ಷರಾಗಿ ಆರ್. ಬಿ. ಜಗದೀಶ್, ವಿನಯ್ ಪಾಯಸ್ ಮತ್ತು ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ, ಹರಿಪ್ರಸಾದ್ ನಂದಳಿಕೆ, ಗಣೇಶ್ ಸಾಬ್ರಕಟ್ಟೆ, ಸಂಜೀವ ಆರ್ಡಿ, ಸಂತೋಷ್ ನಾಯಕ್, ಉದಯ ಕುಮಾರ್ ತಲ್ಲೂರು ಮತ್ತು ಹರ್ಷಿಣಿ ಅವರನ್ನು ಆಯ್ಕೆ ಮಾಡಲಾಯಿತು.

ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿವಾಕರ ಭಂಡಾರಿ ಲೆಕ್ಕಪತ್ರ ಮಂಡಿಸಿದರು. ರಾಕೇಶ್ ಕುಂಜೂರು ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!