ಶರಣ ಸಂಸ್ಕೃತಿ ಉತ್ಸವದಲ್ಲಿ ಪೇಜಾವರಶ್ರೀ ಭಾಗಿ
(ಸುದ್ದಿಕಿರಣ ವರದಿ)
ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶ್ರೀ ಮುರುಘಾ ಶರಣರ ಪೀಠಾರೋಹಣದ 30ನೇ ವರ್ಧಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಶರಣ ಸಂಸ್ಕೃತಿ ಉತ್ಸವದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿ, ಸಂದೇಶ ನೀಡಿದರು.
ಶ್ರೀ ಮುರುಘಾ ಶರಣರು ಪೇಜಾವರ ಶ್ರೀಗಳನ್ನು ಗೌರವಿಸಿದರು.
ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮೊದಲಾದವರಿದ್ದರು.