Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ಕಡಿಯಾಳಿ ದೇವಳಕ್ಕೆ ಪೇಜಾವರಶ್ರೀ ಭೇಟಿ

ಕಡಿಯಾಳಿ ದೇವಳಕ್ಕೆ ಪೇಜಾವರಶ್ರೀ ಭೇಟಿ

ಕಡಿಯಾಳಿ ದೇವಳಕ್ಕೆ ಪೇಜಾವರಶ್ರೀ ಭೇಟಿ
(ಸುದ್ದಿಕಿರಣ ವರದಿ)

ಉಡುಪಿ: ಶರನ್ನವರಾತ್ರಿ ಪರ್ವಕಾಲದಲ್ಲಿ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಇಲ್ಲಿನ ಕಡಿಯಾಳಿ ದೇವಳಕ್ಕೆ ಭೇಟಿ ನೀಡಿ, ಶ್ರೀ ಮಹಿಷಮರ್ದಿನಿ ದೇವಿ ದರುಶನ ಪಡೆದರು.

ಸುಮಾರು 6ನೇ ಶತಮಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನ, ಉಡುಪಿ ಶ್ರೀಕೃಷ್ಣ ಮಠದೊಂದಿಗೂ ಅವಿನಾಭಾವ ಸಂಬಂಧ ಹೊಂದಿದೆ.

ಶ್ರೀದೇವಸ್ಥಾನ ವತಿಯಿಂದ ದೇವಳದ ಪವಿತ್ರಪಾಣಿ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯಾಯ ಅವರು ಶ್ರೀಗಳಿಗೆ ಗೌರವ ಸಲ್ಲಿಸಿದರು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ವ್ಯವಸ್ಥಾಪನ ಮಂಡಳಿ ಸದಸ್ಯರಾದ ಕೆ. ನಾಗರಾಜ ಶೆಟ್ಟಿ, ಮಂಜುನಾಥ ಹೆಬ್ಬಾರ್, ರಮೇಶ್ ಶೇರಿಗಾರ್ ಮತ್ತು ಸಂಧ್ಯಾ ಪ್ರಭು, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ರಾಮಚಂದ್ರ ಸನಿಲ್ ಕಡಿಯಾಳಿ ಮತ್ತು ಭಾರತೀ ಚಂದ್ರಶೇಖರ್, ದೇವಳದ ಅರ್ಚಕರು, ಸಿಬ್ಬಂದಿ ವರ್ಗ ಸೇರಿದಂತೆ ಅನೇಕ ಮಂದಿ ಭಕ್ತಾದಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!