Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಪೇಜಾವರ ಶ್ರೀಗೆ ಎಕ್ಸ್ ಶ್ರೇಣಿ ಭದ್ರತೆ

ಪೇಜಾವರ ಶ್ರೀಗೆ ಎಕ್ಸ್ ಶ್ರೇಣಿ ಭದ್ರತೆ

ಉಡುಪಿ: ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ `ಎಕ್ಸ್’ ಶ್ರೇಣಿ ಭದ್ರತೆ ಒದಗಿಸಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಜನಜಾಗೃತಿ ಅಭಿಯಾನದಲ್ಲಿ ಸಕ್ರಿಯರಾಗಿರುವ ಪೇಜಾವರ ಶ್ರೀಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಈಚೆಗೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದರು.

ಮನವಿಗೆ ಸ್ಪಂದಿಸಿದ ಸರಕಾರ `ಎಕ್ಸ್’ ಶ್ರೇಣಿ ಭದ್ರತೆ ಒದಗಿಸಿದೆ.

ಪೇಜಾವರ ಶ್ರೀಗಳಿಗೆ ಎಕ್ಸ್ ಶ್ರೇಣಿ ಭದ್ರತೆ ಒದಗಿಸುವಲ್ಲಿ ಸಹಕರಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ರಘುಪತಿ ಭಟ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಾಮಾಜಿಕ ಕಾರ್ಯಕರ್ತ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!