ಮಂಗಳೂರು: ಕೃಷ್ಣೈಕ್ಯರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆಪ್ತಸಹಾಯಕನಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಸುಬ್ರಹ್ಮಣ್ಯ ಹೆಬ್ಬಾರ್ ಪೆರಂಪಳ್ಳಿ ಅವರನ್ನು ಇಲ್ಲಿನ ಶಾರದಾ ವಿದ್ಯಾಲಯದಲ್ಲಿ ನಡೆದ ಗುರು ಸಂಸ್ಮರಣೆ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸನ್ಮಾನಿಸಿದರು.
ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರೊ. ಎಂ. ಬಿ. ಪುರಾಣಿಕ್, ಪ್ರದೀಪ್ ಕಲ್ಕೂರ, ಗಣೇಶ್ ಕಾರ್ಣಿಕ್ ಇದ್ದರು