Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಸರ್ಕಾರಿ ಕಚೇರಿಗಳಲ್ಲಿ ಛಾಯಾಗ್ರಹಣ, ವೀಡಿಯೊಗ್ರಫಿ ನಿಷೇಧ

ಸರ್ಕಾರಿ ಕಚೇರಿಗಳಲ್ಲಿ ಛಾಯಾಗ್ರಹಣ, ವೀಡಿಯೊಗ್ರಫಿ ನಿಷೇಧ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15

ಸರ್ಕಾರಿ ಕಚೇರಿಗಳಲ್ಲಿ ಛಾಯಾಗ್ರಹಣ, ವೀಡಿಯೊಗ್ರಫಿ ನಿಷೇಧ
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಇನ್ನು ಮುಂದೆ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋಗ್ರಫಿ ಹಾಗೂ ವೀಡಿಯೊಗ್ರಫಿ ಮಾಡದಂತೆ ನಿರ್ಬಂಧಿಸಿ ಸರ್ಕಾರ ಆದೇಶಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಆದೇಶ ಹೊರಡಿಸಿದೆ.

ನೌಕರರ ಸಂಘ ತನ್ನ ಮನವಿಯಲ್ಲಿ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವರು ಕಚೇರಿಯ ಫೋಟೋ, ವೀಡಿಯೊಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ.

ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಮನವಿ ಮಾಡಿತ್ತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!