ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ವನಮಹೋತ್ಸವ ನಡೆಸಲಾಯಿತು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ. ಎನ್. ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ಉಡುಪಿ ವಲಯ ಉಪ ವಲಯ ಅರಣ್ಯಾಧಿಕಾರಿ ಗುರುರಾಜ ಕಾವ್ರಾಡಿ ಇದ್ದರು.