ಬ್ರಹ್ಮಾವರ: ಹಾರಾಡಿಯ ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆ ಹಾಗೂ ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಸಂಯುಕ್ತಾಶ್ರಯದಲ್ಲಿ ಈಚೆಗೆ ಸಂಸ್ಥೆ ವಠಾರದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಉಡುಪಿ ದೊಡ್ಡಣಗುಡ್ಡೆ ಡಾ. ಎ. ವಿ. ಬಾಳಿಗ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಪಿ. ವಿ. ಭಂಡಾರಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗಿಡಗಳ ಪ್ರಾಯೋಜಕ ಮಧುಸೂದನ ಹೇರೂರು, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ರಾಮಚಂದ್ರ ಕಾಮತ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕುಡೆ, ವೈದ್ಯಕೀಯ ಪ್ರತಿನಿಧಿ ರಾಘವೇಂದ್ರ ಪ್ರಭು ಕರ್ವಾಲು, ಆಸ್ಪತ್ರೆಯ ಅಧಿಕಾರಿಗಳಾದ ಕರುಣಾಕರ ಶೆಟ್ಟಿ ಮತ್ತು ಗಣೇಶ್ ಮೊದಲಾದವರಿದ್ದರು