Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಕೊನೆಗೂ ಕಾಂಗ್ರೆಸ್ ಗೆ ಕೈಕೊಟ್ಟ ಪ್ರಮೋದ್

ಕೊನೆಗೂ ಕಾಂಗ್ರೆಸ್ ಗೆ ಕೈಕೊಟ್ಟ ಪ್ರಮೋದ್

ಸುದ್ದಿಕಿರಣ ವರದಿ
ಶನಿವಾರ, ಮೇ 7

ಕೊನೆಗೂ ಕಾಂಗ್ರೆಸ್ ಗೆ ಕೈಕೊಟ್ಟ ಪ್ರಮೋದ್
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು, ಉಡುಪಿ ಜಿಲ್ಲೆಯ ಕಾಂಗ್ರೆಸ್ ನ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ತನಗೆ ಕಾಂಗ್ರೆಸ್‌ನಲ್ಲಿ ಮುಂದುವರಿಯುವುದು ಅಸಾಧ್ಯ ಎಂದು ತಿಳಿಸಿದ್ದಾರೆ.

ಆ ಮೂಲಕ ಪ್ರಮೋದ್ ಕಾಂಗ್ರೆಸ್ ನಲ್ಲಿದ್ದಾರೋ ಇಲ್ಲವೋ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರ ಲಭಿಸಿದಂತಾಗಿದೆ.

ಪ್ರಮೋದ್ ಮುಂದಿನ ನಡೆ ಬಿಜೆಪಿ ಕಡೆ ಎಂದು ಬಿಂಬಿಸಲಾಗುತ್ತಿದೆ. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಪ್ರಮೋದ್ ಸೇರ್ಪಡೆ ಕುರಿತಂತೆ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷ ವರಿಷ್ಠರಿಗೆ ರವಾನಿಸಲಾಗಿದೆ. ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಈಗಾಗಲೇ ಪ್ರಮೋದ್ ಜೊತೆ ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಪಕ್ಷ ಪ್ರಮುಖರು ಒಂದು ಸುತ್ತಿನ ಮಾತುಕತೆ ನಡೆಸಿರುವುದಾಗಿಯೂ ಕುಯಿಲಾಡಿ ಬಹಿರಂಗಪಡಿಸಿದ್ದರು.

ಶಾಸಕ ರಘುಪತಿ ಭಟ್ ಅವರು ಪ್ರಮೋದ್ ಸೇರ್ಪಡೆಗೆ ತನ್ನ ವಿರೋಧ ಇಲ್ಲ ಎಂದು ಹೇಳಿದ್ದಲ್ಲದೇ ಪಕ್ಷ ವರಿಷ್ಠರಿಂದ ತನಗೆ ಯಾವುದೇ ಮಾಹಿತಿ ಬಂದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!