ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 29
ಹೆಜಮಾಡಿ ಚೆಕ್ ಪೋಸ್ಟ್ ಬಳಿ ಮುತಾಲಿಕ್ ಪೊಲೀಸ್ ವಶಕ್ಕೆ
ಪಡುಬಿದ್ರಿ: ದ.ಕ. ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮಂಗಳೂರು ಪೊಲೀಸರು ಶುಕ್ರವಾರ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದುಕೊಂಡು, ಬಳಿಕ ವಾಪಾಸು ಕಳಿಸಿದ್ದಾರೆ.
ದ.ಕ. ಜಿಲ್ಲೆ ಪ್ರವೇಶಿಸದಂತೆ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಹೊರಡಿಸಿದ್ದರೂ ಮುತಾಲಿಕ್ ಆಗಮಿಸಿದ್ದರಿಂದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಅವರನ್ನು ವಶಕ್ಕೆ ಪಡೆದು, ವಾಪಾಸು ಕಳಿಸಲಾಗಿದೆ.
ಜನತೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮನವಿ ಮಾಡಿದ್ದಾರೆ.