Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಅನುಮತಿಯಿಲ್ಲದೆ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು

ಅನುಮತಿಯಿಲ್ಲದೆ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು

ಉಡುಪಿ: ಸಿ.ಎಫ್.ಐ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶೀಯನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಇಲ್ಲಿನ ಕ್ಲಾಕ್ ಟವರ್ ಎದುರು ಯಾವುದೇ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡರು.

ಯಾವುದೇ ಪೂರ್ವಾನುಮತಿ ಪಡೆಯದೇ ಏಕಾ ಏಕಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕೇಂದ್ರ ಸರಕಾರ ಮತ್ತು ಸಂಘ ಪರಿವಾರದ ವಿರುದ್ದ ಘೋಷಣೆ ಕೂಗಿದರು.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಠಾಣೆಯ ಪಿಎಸ್.ಐ ಸಕ್ತಿವೇಲು ಪ್ರತಿಭಟನೆ ಕೈಬಿಡುವಂತೆ ಸೂಚನೆ ನೀಡಿದರು.

ಪೊಲೀಸರ ಮಾತಿಗೂ ಕ್ಯಾರೇ ಎನ್ನದೆ ಸಿಎಫ್.ಐ ಕಾರ್ಯಕರ್ತರು ಘೋಷಣೆ ಕೂಗುತ್ತ ಪ್ರತಿಭಟನೆ ಮುಂದುವರಿಸಿದ್ದು ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಅಷ್ಟಾದರೂ ಎಚ್ಚೆತ್ತುಕೊಳ್ಳದ ಸಿಎಫ್.ಐ ಕಾರ್ಯಕರ್ತರು ಸಂಘಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದ್ದು, ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯ ಎಲ್ಲಾ ಕಾರ್ಯಕರ್ತರನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!