ಸುದ್ದಿಕಿರಣ ವರದಿ
ಸೋಮವಾರ, ಜೂನ್ 13
ರಾಜ್ಯಕ್ಕೆ ಭೇಟಿ ನೀಡಿದ ರಾಷ್ಟ್ರಪತಿ
ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದರು.
ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದರದಿಂದ ಬರಮಾಡಿಕೊಂಡರು.
ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಕೋವಿಂದ್ ಚಾಲನೆ ನೀಡಿದರು. ಸಮಾರಂಭದಲ್ಲಿ ರಾಮನಾಥ ಕೋವಿಂದ್ ಪತ್ನಿ ಸವಿತಾ ಕೋವಿಂದ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲಾದವರಿದ್ದರು.