Wednesday, August 10, 2022
Home ಸಮಾಚಾರ ರಾಜ್ಯ ವಾರ್ತೆ ಬಹುಶ್ರುತ ವಿದ್ವಾಂಸ ಪ್ರೊ. ಎಸ್. ಕೆ. ನಾರಾಯಣಾಚಾರ್ಯ ಇನ್ನಿಲ್ಲ

ಬಹುಶ್ರುತ ವಿದ್ವಾಂಸ ಪ್ರೊ. ಎಸ್. ಕೆ. ನಾರಾಯಣಾಚಾರ್ಯ ಇನ್ನಿಲ್ಲ

ಬಹುಶ್ರುತ ವಿದ್ವಾಂಸ ಪ್ರೊ. ಎಸ್. ಕೆ. ನಾರಾಯಣಾಚಾರ್ಯ ಇನ್ನಿಲ್ಲ

ಬೆಂಗಳೂರು, ನ. 26 (ಸುದ್ದಿಕಿರಣ ವರದಿ): ಹಿರಿಯ ವಿದ್ವಾಂಸ, ಖ್ಯಾತ ಲೇಖಕ, ಪ್ರಬೋಧಕ ಪ್ರೊ. ಕೆ. ಎಸ್. ನಾರಾಯಣಾಚಾರ್ಯ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

1933ರಲ್ಲಿ ಕನಕಪುರದ ವೈದಿಕ ಶ್ರೀವೈಷ್ಣವ ಕುಟುಂಬದಲ್ಲಿ ಜನಿಸಿದ ಅವರು, ದ. ರಾ. ಬೇಂದ್ರೆ ಅವರಿಂದ ಪ್ರೇರಣೆಗೊಂಡು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು.

ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಅವರು, ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದು ಸಾರಸ್ವತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಬಳಿಕ ಪ್ರಾಂಶುಪಾಲರಾಗಿ ನಿವೃತ್ತರಾದರು. ವೇದಗಳು, ರಾಮಾಯಣ, ಮಹಾಭಾರತ, ಭಾಗವತಗಳಲ್ಲಿ ವಿಶೇಷ ಪರಿಣತಿ ಹೊಂದಿದ್ದ ಅವರು ಬೇಂದ್ರೆ ಮತ್ತು ಕೌಟಿಲ್ಯನ ಅರ್ಥಶಾಸ್ತ್ರದ ಬಗ್ಗೆ ಕೃತಿ ರಚಿಸಿದ್ದಾರೆ

70ಕ್ಕೂ ಅಧಿಕ ಗ್ರಂಥ ರಚನೆಕಾರ
ರಾಮಾಯಣಸಹಶ್ರೀ, ಗೀತಾರತ್ನನಿಧಿ, ರಾಮಾಯಣ ಪಾತ್ರ ಪ್ರಪಂಚ, ಅಗಸ್ತ್ಯ, ಶ್ರೀಮಾತೆ ಕುಂತಿ ಕರೆದಾಗ, ಚಾಣಕ್ಯ ನೀತಿ ಸೂತ್ರಗಳು, ಶ್ರೀರಾಮಾವತಾರ ಸಂಪೂರ್ಣವಾದಾಗ, ವನದಲ್ಲಿ ಪಾಂಡವರು, ದಶಾವತಾರ ಸೇರಿದಂತೆ 70ಕ್ಕೂ ಹೆಚ್ಚು ಗ್ರಂಥ ರಚಿಸಿದ್ದರು.

ಲೇಖನ, ಪ್ರವಚನ ಮತ್ತು ವಿವಿಧ ಮಾಧ್ಯಮಗಳ ಚರ್ಚೆಯಗಳಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರಗಳ ಬಗ್ಗೆ ಆಧಿಕಾರಯುತವಾಗಿ ಅರ್ಥಪೂರ್ಣ ವಿಷಯಗಳನ್ನು ಪ್ರತಿಪಾದಿಸುವ ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಕನ್ನಡ, ಸಂಸ್ಕೃತ, ತಮಿಳು, ಇಂಗ್ಲಿಷ್ ಭಾಷಾ ಕೋವಿದರ ದೇಹಾಂತ್ಯ ಸಾಹಿತ್ಯ ವಲಯಕ್ಕೆ ದುಃಖ ತಂದಿದೆ.

ಅವರ ಕೃತಿಗಳ ಮೂಲಕ ಸದಾಕಾಲ ಅವರು ನೆನಪು ಉಳಿಯಲಿದೆ.

ಸಾಹಿತ್ಯ ಅಕಾಡೆಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾರಾಯಣಾಚಾರ್ಯ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ

ಪ್ರೊ. ಆಚಾರ್ಯ ನಿಧನಕ್ಕೆ ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!