Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಜನಜಾಗೃತಿ ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಹಿರಿದು

ಜನಜಾಗೃತಿ ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಹಿರಿದು

ಕಾರ್ಕಳ: ಜನಜಾಗೃತಿ ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರ ಎಂದು ಕಾಪು ಪತ್ರಕರ್ತರ ಸಂಘ ಸದಸ್ಯ ಪುಂಡಲೀಕ ಮರಾಠೆ ಹೇಳಿದರು.

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇಲ್ಲಿನ ರೋಟರಿ ಬಾಲಭವನದಲ್ಲಿ ಬುಧವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪತ್ರಿಕೆಗಳೆಂದರೆ ಮಿನಿ ವಿಶ್ವಕೋಶ ಇದ್ದಂತೆ. ಸಂವಿಧಾನದ ಬದ್ಧತೆಯಿಂದ, ಜನಸಾಮಾನ್ಯರ ಕಷ್ಟನಷ್ಟಗಳನ್ನು ಬಿಂಬಿಸುವಲ್ಲಿ ಪತ್ರಿಕೆಗಳ ಪಾತ್ರ ಗಮನೀಯ. ಪತ್ರಿಕೆಗಳು ಪಾರದರ್ಶಕವಾಗಿದ್ದು ವಸ್ತುನಿಷ್ಠ, ನಿಖರ ಸುದ್ದಿ ನೀಡಬೇಕು ಎಂದವರು ಆಶಿಸಿದರು.

ಅಭ್ಯಾಗತರಾಗಿದ್ದ ಕಾರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶೆಣೈ, ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವುದು ಹಾಗೂ ಮಾನವೀಯ ಮೌಲ್ಯಗಳನ್ನು ಮಿಡಿಯುವಲ್ಲಿ ಪತ್ರಿಕಾರಂಗ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಉಪಾಧ್ಯಕ್ಷ ಆರ್. ಬಿ. ಜಗದೀಶ್, ಜಿಲ್ಲಾ ಸಂಘದ ಪ್ರತಿನಿಧಿ ಹರಿಪ್ರಸಾದ್ ನಂದಳಿಕೆ, ರೋಟರಿ ಸದಸ್ಯ ಇಕ್ಬಾಲ್ ಅಹ್ಮದ್ ಇದ್ದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ಪ್ರಕಾಶ್ ಕಿಣಿ ಅಜೆಕಾರು, ಹರಿಶ್ಚಂದ್ರ ನಾಯಕ್ ಮಾಳ, ನಿತ್ಯಾನಂದ ನಾಯಕ್ ಬಜಗೋಳಿ, ಗಣಪತಿ ಭಟ್ ಮತ್ತು ರವೀಂದ್ರ ಕಾಮತ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ ಸ್ವಾಗತಿಸಿ, ಶರತ್ ಶೆಟ್ಟಿ ಕಿನ್ನಿಗೋಳಿ ನಿರೂಪಿಸಿದರು. ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ್ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!