Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕರಂಬಳ್ಳಿ ದೇವಳಕ್ಕೆ ಪುತ್ತಿಗೆಶ್ರೀ ಭೇಟಿ

ಕರಂಬಳ್ಳಿ ದೇವಳಕ್ಕೆ ಪುತ್ತಿಗೆಶ್ರೀ ಭೇಟಿ

ಉಡುಪಿ: ಪುನಃಪ್ರತಿಷ್ಠಾಪೂರ್ವಕ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪಲಿಮಾರು ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಅವರು ಶ್ರೀಪಾದರನ್ನು ಬರಮಾಡಿಕೊಂಡರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ತುಳು ವೀಡಿಯೊ ಆಲ್ಬಮ್ ಹಾಡು ಅನಾವರಣಗೊಳಿಸಿ ಆಶೀರ್ವಚನ ನೀಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯಶಪಾಲ್ ಸುವರ್ಣ, ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯಕರ ಶೆಟ್ಟಿ ಇಂದ್ರಾಳಿ, ಸ್ಥಳೀಯ ನಗರಸಭಾ ಸದಸ್ಯ ಗಿರಿಧರ ಆಚಾರ್ಯ ಕರಂಬಳ್ಳಿ, ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ ಐತಾಳ್, ಪರ್ಯಾಯ ಅರ್ಚಕ ಗೋವಿಂದ ಐತಾಳ್ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!