ಅಮೆರಿಕಾದಲ್ಲೂ ರಾಘವೇಂದ್ರಸ್ವಾಮಿ ಆರಾಧನೆ
(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಮೆರಿಕಾದ ನ್ಯೂಜೆರ್ಸಿ ಪುತ್ತಿಗೆ ಮಠದಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿದ್ದು, ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಉತ್ಸವ ಸಂಭ್ರಮದಿಂದ ನಡೆಯಿತು.
ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಮಂದಿ ಭಕ್ತರು ಭಾಗವಹಿಸಿದ್ದರು. ವಿಶೇಷ ಪೂಜೆ, ಅಭಿಷೇಕ ಆಯೋಜಿಸಲಾಗಿತ್ತು.
ಮಠದ ಆಡಳಿತಾಧಿಕಾರಿ ಪ್ರಸನ್ನಾಚಾರ್ಯ ಇದ್ದರು.