Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಮಂಗಳೂರು- ಮಡಗಾಂವ್ ಪ್ಯಾಸೆಂಜರ್ ರೈಲು ಪುನರಾರಂಭಿಸಲು ಮನವಿ

ಮಂಗಳೂರು- ಮಡಗಾಂವ್ ಪ್ಯಾಸೆಂಜರ್ ರೈಲು ಪುನರಾರಂಭಿಸಲು ಮನವಿ

ಉಡುಪಿ: ಮಂಗಳೂರು- ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆಯನ್ನು ಪುನರಾರಂಭಿಸುವಂತೆ ಸೋಮವಾರ ಉಡುಪಿಗಾಗಮಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸ್ವಚ್ಛ ಭಾರತ್ ಫ್ರೆಂಡ್ಸ್ ಮನವಿ ಮಾಡಿತು.

ಈ ರೈಲು ಸ್ಥಗಿತಗೊಂಡು 9 ತಿಂಗಳು ಕಳೆದಿದ್ದು, ಕರಾವಳಿ ಕರ್ನಾಟಕ ಭಾಗದ ರೈತರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಸಣ್ಣ ವ್ಯಾಪಾರಿಗಳ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ.

ಸಾಮಾನ್ಯ ಜನರ ಹಿತದೃಷ್ಟಿಯಿಂದ ಈ ರೈಲನ್ನು ಅತಿ ಶೀಘ್ರದಲ್ಲಿ ಪುನರಾರಂಭಗೊಳಿಸುವಂತೆ ಮನವಿಯಲ್ಲಿ ವಿನಂತಿಸಲಾಯಿತು.

ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ಜಿಲ್ಲಾ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು, ತಾಲೂಕು ಸಂಯೋಜಕರಾದ ಜಗದೀಶ್ ಶೆಟ್ಟಿ ಮತ್ತು ಉದಯ ನಾಯ್ಕ್ ಮನವಿ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!