Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ರಾಜ್ಯಾಧ್ಯಕ್ಷರ ಬದಲಾವಣೆಗೆ ಕೇಂದ್ರದಿಂದ ಸೂಚನೆ ಬಂದಿಲ್ಲ

ರಾಜ್ಯಾಧ್ಯಕ್ಷರ ಬದಲಾವಣೆಗೆ ಕೇಂದ್ರದಿಂದ ಸೂಚನೆ ಬಂದಿಲ್ಲ

ಕುಂದಾಪುರ: ಪ್ರಸ್ತುತ ನಾವು ಉಪಚುನಾವಣೆ ತಯಾರಿಯಲ್ಲಿದ್ದೇವೆ. ಉಪ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಗೆಲ್ಲುವುದು ಮಾತ್ರ ನಮ್ಮ ಗುರಿ. ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆ ಬಗ್ಗೆ ನಮಗೆ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದ. ಕ. ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ಶನಿವಾರ ಕೋಟ ವಿವೇಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹೊಳಪು ಕಾರ್ಯಕ್ರಮಕ್ಕಾಗಮಿಸಿದ ಸಂದರ್ಭದಲ್ಲಿ ತನ್ನನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ಹೊಳಪು ಹೆಸರಿನ ಹಬ್ಬದ ಮೂಲಕ ಜನಪ್ರತಿನಿಧಿಗಳನ್ನು ಒಂದೆಡೆ ಸೇರಿಸುವ ಕಾರ್ಯ, ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿಭಿನ್ನ ಕಲ್ಪನೆ. ಅದಕ್ಕೆ ಅವರು ಅಭಿನಂದನಾರ್ಹರು. ಇದೊಂದು ಅದ್ಭುತ ಕಾರ್ಯಕ್ರಮ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!