ಉಡುಪಿ: ಬಿಜೆಪಿ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯದ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠ ರಾಜ್ಯ ಸಂಚಾಲಕ ಯಶಪಾಲ್ ಸುವರ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸನ್ಮಾನಿಸಿದರು.
ಮೀನುಗಾರರ ಸಹಕಾರಿ ಕ್ಷೇತ್ರದ ವಿಶಿಷ್ಟ ಸೇವೆಗಾಗಿ ಮೀನುಗಾರಿಕೆ ಇಲಾಖೆಯಿಂದ ಅತ್ಯುತ್ತಮ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಯಶಪಾಲ್ ಅವರ ದಕ್ಷತೆಯನ್ನು ಮನ್ನಿಸಿ ಈ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಕೋಷ್ಠ ಪ್ರಭಾರಿ ಭಾನುಪ್ರಕಾಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್, ಪ್ರಮುಖರಾದ ಶಿವಯೋಗಿ ಇದ್ದರು
ರಾಜ್ಯಾಧ್ಯಕ್ಷರಿಂದ ಅಭಿನಂದನೆ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...