Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ರಕ್ತದಾನದ ಮೂಲಕ ಅಟಲ್ ಜನ್ಮದಿನಾಚರಣೆ

ರಕ್ತದಾನದ ಮೂಲಕ ಅಟಲ್ ಜನ್ಮದಿನಾಚರಣೆ

ಉಡುಪಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆಯನ್ನು ರಕ್ತದಾನ ನಡೆಸುವ ಮೂಲಕ ಜಿಲ್ಲಾ ಬಿಜೆಪಿ ಆಚರಿಸಿತು.

ಬಿಜೆಪಿ ಉಡುಪಿ ಜಿಲ್ಲೆ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿ, ಅಟಲ್ ಸಾಧನೆ ಸ್ಮರಿಸಿದರು.

ಅಭ್ಯಾಗತರಾಗಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಾಜಪೇಯಿ ಅವರು ಸಲ್ಲಿಸಿದ ಕೊಡುಗೆಗಳನ್ನು ಸ್ಮರಿಸಿದರು.

ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ಪ್ರದೀಪ್ ವರ್ಣೇಕರ್, ಸಹ ಸಂಚಾಲಕ ಡಾ. ರಾಮಚಂದ್ರ ಕಾಮತ್, ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಡಾ. ಅಣ್ಣಯ್ಯ ಕುಲಾಲ್, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ವಿಜಯಕುಮಾರ್ ಉದ್ಯಾವರ, ಶಿಬಿರ ಸಂಚಾಲಕ ರೋಶನ್ ಶೆಟ್ಟಿ, ಸತೀಶ್ ಸಾಲ್ಯಾನ್ ಮೊದಲಾದವರಿದ್ದರು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ನಿರೂಪಿಸಿ, ವಂದಿಸಿದರು.

ಶಿಬಿರದಲ್ಲಿ ರಕ್ತದಾನಿಗಳಿಂದ ಒಟ್ಟು 103 ಯೂನಿಟ್ ರಕ್ತ ಸಂಗ್ರಹಿಸಲಾಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!