Saturday, July 2, 2022
Home ಸಮಾಚಾರ ಹೆಬ್ರಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಗೆ ರಂಜನಿ ಹೆಬ್ಬಾರ್ ಸಾರಥ್ಯ

ಹೆಬ್ರಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಗೆ ರಂಜನಿ ಹೆಬ್ಬಾರ್ ಸಾರಥ್ಯ

ಉಡುಪಿ, ಜು. 11 (ಸುದ್ದಿಕಿರಣ ವರದಿ): ಹೆಬ್ರಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ರಂಜನಿ ಹೆಬ್ಬಾರ್ ಆಯ್ಕೆಯಾಗಿದ್ದಾರೆ.

ಈಚೆಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮವೊಂದರಲ್ಲಿ ನೇಮಕಾತಿ ಆದೇಶಪತ್ರ ನೀಡಲಾಯಿತು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ನೀಡಿದ ಆದೇಶಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ರಂಜನಿ ಹೆಬ್ಬಾರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವೀಕ್ಷಕ ಹರೀಶ್ ಕಿಣಿ, ರಾಜ್ಯ ಹಿಂದುಳಿದ ವರ್ಗಗಳ ಘಟಕ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿತೇಶ್, ಕೀರ್ತಿ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಹೆಬ್ಬಾರ್, ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷೆ ಅನಿತಾ ಡಿ’ಸೋಜ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಸುಗುಣಾ ಪೂಜಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಾಮದ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!