Saturday, July 2, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಆತ್ಮನಿರ್ಭರ ಭಾರತದತ್ತ ದಿಟ್ಟ ಹೆಜ್ಜೆ

ಆತ್ಮನಿರ್ಭರ ಭಾರತದತ್ತ ದಿಟ್ಟ ಹೆಜ್ಜೆ

ಮಣಿಪಾಲ: ಇಲ್ಲಿನ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ), ಆತ್ಮನಿರ್ಭರ ಭಾರತದತ್ತ ದಿಟ್ಟ ಹೆಜ್ಜೆ ಇರಿಸಿದ್ದು, ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘ ಚಾಲಕ್ ಮೋಹನ ಭಾಗವತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾಹೆ ಕ್ಯಾಂಪಸ್ ಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಉನ್ನತ ಶಿಕ್ಷಣ, ಆರೋಗ್ಯ, ಸಂಶೋಧನೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮಾಹೆ ಹೆಚ್ಚಿನ ಒತ್ತುನೀಡಿರುವುದು ಸ್ತುತ್ಯರ್ಹ. ಭಾರತೀಯ ಶಿಕ್ಷಣ ಪದ್ಧತಿ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಂಡಿರುವುದು ಅಭಿನಂದನೀಯ ಎಂದರು.

ಆತ್ಮನಿರ್ಭರ ಭಾರತ ಪರಿಕಲ್ಪನೆ ದೇಶದಾದ್ಯಂತ ಅನುಷ್ಠಾನವಾಗಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ, ಗುರು- ಹಿರಿಯರಿಗೆ ಗೌರವ ನೀಡುವ, ಸದ್ವಿಚಾರ ತಿಳಿಸುವ ಕಾರ್ಯ ನಡೆಯಬೇಕು. ಮಾಹೆಯಲ್ಲಿ ಈ ಎಲ್ಲ ಅಂಶಗಳನ್ನು ಕಾಣಬಹುದಾಗಿದೆ ಎಂದರು.

ಅನಾಟಮಿ ಹಾಗೂ ಪೆಥಾಲಜಿ ಮ್ಯೂಸಿಯಮ್ ಗೆ ಭೇಟಿ ನೀಡಿದ ಭಾಗವತ್, `ಮ್ಯಾಪ್’ ಡಿಜಿಟಲೀಕರಣಕ್ಕೆ ಚಾಲನೆ ನೀಡಿದರು.

ಮಾಹೆ ಟ್ರಸ್ಟ್ ಅಧ್ಯಕ್ಷ ಡಾ. ರಂಜನ್ ಪೈ, ಮಾಹೆ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್, ಕುಲಪತಿ ಡಾ. ಎಂ. ಡಿ. ವೆಂಕಟೇಶ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!