Tuesday, May 17, 2022
Home ಸಮಾಚಾರ ಜಿಲ್ಲಾ ಸುದ್ದಿ ಕೃಷ್ಣಮಠದಲ್ಲಿ ಸಾಧಕರಿಗೆ ಸನ್ಮಾನ

ಕೃಷ್ಣಮಠದಲ್ಲಿ ಸಾಧಕರಿಗೆ ಸನ್ಮಾನ

ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣಮಠ ಆಶ್ರಯದಲ್ಲಿ ನಡೆಯುತ್ತಿರುವ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಮಂಗಳೂರು ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ, ಉದ್ಯಮಿ ಬಾಲಾಜಿ ರಾಘವೇಂದ್ರ ಆಚಾರ್ಯ, ಕಲಾಸಂಘಟಕ ಎಸ್. ವಿ. ಭಟ್, ಮಂಗಳೂರು ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪಕುಮಾರ್ ಕಲ್ಕೂರ, ಮಣಿಪಾಲ ಕಲಾಸಂಘಟಕ ಟಿ. ರಂಗ ಪೈ ಅವರನ್ನು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸನ್ಮಾನಿಸಿ, ಅನುಗ್ರಹ ಸಂದೇಶ ನೀಡಿದರು.

ಕೊಲ್ಹಾಪುರ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪೇಜಾವರ ಮಠ ಕುರಿತು ಉಪನ್ಯಾಸ
ಅದಕ್ಕೂ ಮುನ್ನ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ವಿದ್ವಾನ್ ರಾಮವಿಠಲ ಆಚಾರ್ಯ ಹಾಗೂ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಅವರು ಪೇಜಾವರ ಮಠ ಪರಂಪರೆ ಬಗ್ಗೆ ಮತ್ತು ಪೇಜಾವರ ಮಠದ ಪರ್ಯಾಯ ನೆನಪಿನ ಕುರಿತು ಉಪನ್ಯಾಸ ನೀಡಿದರು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಇದ್ದರು.

ಯಕ್ಷಗಾನ ಪ್ರದರ್ಶನ
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ನುರಿತ ಕಲಾವಿದರಿಂದ ಸಮರ ಸೌಗಂಧಿಕೆ ಪ್ರಸಂಗದ ಬಡಗುತಿಟ್ಟು ಯಕ್ಷಗಾನ ನಡೆಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!