Monday, July 4, 2022
Home ಸಮಾಚಾರ ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ

ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ

ಉಡುಪಿ: ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರ. ಇಂದು ಗ್ರಾಮ ಪಂಚಾಯತ್ ಸಹಿತ ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಅಭಿವೃದ್ಧಿ ಪರ ಆಡಳಿತವಿದೆ. ಈ ಪರ್ವಕಾಲದಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ. ಪಂ. ಅಭ್ಯರ್ಥಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಜನತೆ ಗ್ರ್ರಾಮಾಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶಾಸಕ ರಘುಪತಿ ಭಟ್ ಮನವಿ ಮಾಡಿದರು.

ಪಂದುಬೆಟ್ಟಿನಲ್ಲಿ ನಡೆದ ಅಂಬಲಪಾಡಿ ಗ್ರಾ. ಪಂ. ವ್ಯಾಪ್ತಿಯ ಪಕ್ಷ ಪ್ರಮುಖರು, ಗ್ರಾ.ಪಂ. ಚುನಾವಣಾ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರಗಳು ವಿನೂತನ ಜನಪರ ಯೋಜನೆಗಳ ಅನುಷ್ಠಾನ ಮತ್ತು ವಿಶಿಷ್ಟ ಕಾರ್ಯ ಸಾಧನೆಗಳ ಮೂಲಕ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಉಜ್ವಲ ಉಚಿತ ಗ್ಯಾಸ್ ವಿತರಣೆ, ಕೃಷಿ ಸಮ್ಮಾನ್ ಯೋಜನೆ, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಸಹಾಯ ಹಸ್ತ, ಆರ್ಥಿಕ ಪುನಶ್ಚೇತನಕ್ಕೆ ಸಹಾಯಧನ, ಸ್ವಉದ್ಯೋಗ ಸೃಷ್ಟಿಯ ಆತ್ಮನಿರ್ಭರ ಭಾರತ ಯೋಜನೆ, ನೂತನ ಕೇಂದ್ರ ಕೃಷಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಮಸೂದೆ, ಗ್ರಾಮಾಂತರ ರಸ್ತೆಗಳ ಉನ್ನತೀಕರಣ ಮುಂತಾದ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿ ಅಭಿವೃದ್ಧಿ ಶಖೆ ಆರಂಭಗೊಂಡಿದೆ. ಕಡೆಕಾರು- ಅಂಬಲಪಾಡಿ ಪ್ರದೇಶದಲ್ಲಿ 5 ಕೋ. ರೂ. ಅನುದಾನದಲ್ಲಿ ನದಿದಂಡೆ ರಚನೆ ಕಾಮಗಾರಿ ಆರಂಭಗೊಂಡಿದೆ. ವಾರಾಹಿ ಕುಡಿಯುವ ನೀರಿನ ಯೋಜನೆ 2022ರ ಮಾರ್ಚ್ ನಲ್ಲಿ ಸಂಪೂರ್ಣಗೊಳ್ಳಲಿದ್ದು ಉಡುಪಿ ನಗರದಿಂದ ಅಂಬಲಪಾಡಿ ಗ್ರಾ.ಪಂ. ಸಹಿತ ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾ.ಪಂ.ಗಳ ವ್ಯಾಪ್ತಿಗೂ ನಿರಂತರ ಶುದ್ಧ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗುವುದು. ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಕಸ ನಿರ್ವಹಣೆಯನ್ನು ಉಡುಪಿ ನಗರಸಭೆ ಮಾದರಿಯಲ್ಲೇ ಕರ್ವಾಲು ಘಟಕ ಮೂಲಕ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು. ಅಂಬಲಪಾಡಿ ಗ್ರಾ.ಪಂ.ಗೆ ಸಂಪರ್ಕ ಕೊಂಡಿಯಾಗಿರುವ ಆದಿವುಡುಪಿ- ಮಲ್ಪೆ ರಾಜ್ಯ ಹೆದ್ದಾರಿಯನ್ನು 100 ಅಡಿ ಅಗಲಗೊಳಿಸಿ ಅಭಿವೃದ್ಧಿಪಡಿಸಲು 91 ಕೋ. ರೂ. ಅನುದಾನ ಮಂಜೂರಾಗಿದ್ದು ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಮತ್ತು ಅಂಬಲಪಾಡಿ ಗ್ರಾ.ಪಂ. ಚುನಾವಣೆ ಉಸ್ತುವಾರಿ ಗಿರೀಶ್ ಎಮ್. ಅಂಚನ್ ಚುನಾವಣೆ ಪ್ರಚಾರ ಹಾಗೂ ಗೆಲುವಿನ ಕಾರ್ಯತಂತ್ರ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ಜಿ. ಪಂ. ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ್, ಚುನಾವಣಾ ಸಹ ಉಸ್ತುವಾರಿ ರೋಶನ್ ಶೆಟ್ಟಿ, ಬಿಜೆಪಿ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಸಹ ಸಂಚಾಲಕ ಉಮೇಶ್ ಪೂಜಾರಿ ಕುತ್ಪಾಡಿ, ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ನಾಗರಾಜ್ ಕರ್ಕೇರ ಕಿದಿಯೂರು ಮತ್ತು ವಿಜಯ ಶೆಟ್ಟಿ ಕಪ್ಪೆಟ್ಟು, ಪಕ್ಷ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಗ್ರಾ.ಪಂ. ಮಾಜಿ ಸದಸ್ಯರು, ಗ್ರಾ.ಪಂ. ಚುನಾವಣೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!