Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಸಪ್ತೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಸಪ್ತೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣಮಠ ಆಶ್ರಯದಲ್ಲಿ ಶನಿವಾರದಿಂದ ಆರಂಭಗೊಂಡ ಸಪ್ತೋತ್ಸವ ಸಂದರ್ಭದಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಸಕಲ ಕಲಾಪ್ರಿಯನಾದ ಕೃಷ್ಣ ಸನ್ನಿಧಿಯಲ್ಲಿ ನಡೆಯುವ ಕಲಾ ಪ್ರದರ್ಶನವೂ ಆರಾಧನೆಯ ಭಾಗ ಎಂದರು.
ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಇದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕೊರಂಗ್ರಪಾಡಿ ವಿದ್ವಾನ್ ಸೀತಾರಾಮ ಆಚಾರ್ಯ, ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ರಾಘವೇಂದ್ರ ನಾಯಕ್ ಅವರನ್ನು ಸನ್ಮಾನಿಸಲಾಯಿತು

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!