ಬೆಂಗಳೂರು: ಡಿ.ಆರ್.ಡಿ.ಓ ಮಾಜಿ ವಿಜ್ಞಾನಿ, ಎಚ್.ಎ.ಎಲ್.ನ ಹಿರಿಯ ನಿವೃತ್ತ ಎಂಜಿನಿಯರ್ ಹಾಗೂ ವೈಜ್ಞಾನಿಕ ವಿಚಾರಗಳ ಲೇಖಕ ಸುಧೀಂದ್ರ ಹಾಲ್ದೊಡ್ಡೇರಿ ಶುಕ್ರವಾರ ನಿಧನರಾದರು.
ಕಳೆದ 10 ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಅವರು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಮೆದುಳು ನಿಷ್ಕ್ರಿಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ದೇಹದಾನ
ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅದರಂತೆ ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ನಾಗೇಶ್ ರಾವ್ ಅವರ ಪುತ್ರರಾಗಿರುವ ಸುಧೀಂದ್ರ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.