Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ

ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ

ಉಡುಪಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಅದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲಸಾರ್ ಈಚೆಗೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶಕುಮಾರ್ ಅವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಮನವಿ ಮಾಡಿದ್ದು, ಸಚಿವರು ಪ್ರತಿಕ್ರಿಯಿಸಿದರು.

ಮುಂದಿನ 15 ದಿನಗಳೊಳಗೆ ಹೊಸ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆ ಬಳಿಕ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ಸುರೇಶಕುಮಾರ್ ತಿಳಿಸಿದರು.

ತುಳು ಭಾಷೆ ಅಧಿಕೃತವಾಗಿ ರಾಜ್ಯ ಭಾಷೆಯಾಗಬೇಕು ಎಂದು ಕತ್ತಲಸಾರ್ ಆಗ್ರಹಿಸಿದ್ದು, ಅದಕ್ಕೆ ಸಚಿವರು ಸಹಮತವನ್ನು ವ್ಯಕ್ತಪಡಿಸಿದರು.

ಅಕಾಡೆಮಿ ಸದಸ್ಯೆ ಕಾಂತಿ ಶೆಟ್ಟಿ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!