Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯನಾಗಿ ಶಿವಕುಮಾರ್ ನೇಮಕ

ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯನಾಗಿ ಶಿವಕುಮಾರ್ ನೇಮಕ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26

ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯನಾಗಿ ಶಿವಕುಮಾರ್ ನೇಮಕ
ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶಿಫಾರಸಿನಂತೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಅವರನ್ನು ಕೇಂದ್ರ ಸರಕಾರಿ ಸ್ವಾಮ್ಯದ ಗೋವಾದ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ನ ಇನ್ಸ್ಟಿಟ್ಯೂಟ್ ಮ್ಯಾನೇಜ್ ಮೆಂಟ್ ಕಮಿಟಿ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ನವದೆಹಲಿ ಆದೇಶಿಸಿದೆ.

ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯ ಸಮಿತಿ ಕಾರ್ಯದರ್ಶಿಯಾಗಿ, ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷರಾಗಿ, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರಾಗಿ ಶಿವಕುಮಾರ್ ಸೇವೆ ಸಲ್ಲಿಸಿದ್ದು, ಪ್ತಸಕ್ತ ಎರಡನೇ ಅವಧಿಗೆ ಬಿಜೆಪಿ ಜಿಲ್ಲಾ ಸಹ ವಕ್ತಾರರಾಗಿ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಜೊತೆ ಕಾರ್ಯದರ್ಶಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವ ಸಲಹೆಗಾರ, ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ರೋಟರಿ ಕ್ಲಬ್ ಅಂಬಲಪಾಡಿ ಅತ್ಯುತ್ತಮ ಕ್ಲಬ್ ಪ್ರಶಸ್ತಿ ವಿಜೇತ ಕಾರ್ಯದರ್ಶಿ, ರೋಟರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು ಪ್ರಸಕ್ತ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯ, ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಉಪಾಧ್ಯಕ್ಷ, ಬಾಡಿ ಬಿಲ್ಡಿಂಗ್ ರಾಜ್ಯ ತೀರ್ಪುಗಾರ, ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ ಆಡಳಿತ ಸಮಿತಿ ಸಂಘಟನಾ ಕಾರ್ಯದರ್ಶಿ, ಬಿಲ್ಲವ ಸೇವಾ ಸಂಘ ಅಂಬಲಪಾಡಿ ಉಪಾಧ್ಯಕ್ಷ, ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಪ್ರಧಾನ ಕಾರ್ಯದರ್ಶಿ, ಶ್ರೀರಾಮಾಂಜನೇಯ ಪೂಜಾ ಮಂದಿರ ಅಂಬಲಪಾಡಿ ಸಂಚಾಲಕ, ಅಂಗನವಾಡಿ ಕೇಂದ್ರ ಬಂಕೇರ್ಕಟ್ಟ ಅಂಬಲಪಾಡಿ ಬಾಲವಿಕಾಸ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುವ ಜೊತೆಗೆ ಮಣಿಪಾಲ ಸಮೂಹ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!