Saturday, July 2, 2022
Home ಸಮಾಚಾರ ಶೋಭಾಗೆ ಸಚಿವ ಸ್ಥಾನ: ಮಹಿಳಾ ಮೋರ್ಚಾ ಸಂಭ್ರಮಾಚರಣೆ

ಶೋಭಾಗೆ ಸಚಿವ ಸ್ಥಾನ: ಮಹಿಳಾ ಮೋರ್ಚಾ ಸಂಭ್ರಮಾಚರಣೆ

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಈಚೆಗೆ ಸಂಭ್ರಮಾಚರಣೆ ಮಾಡಲಾಯಿತು.

ಜಿಲ್ಲಾ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ತಾನು ವಹಿಸಿಕೊಂಡ ಜವಾಬ್ದಾರಿಯನ್ನು ಬದ್ಧತೆ ಮತ್ತು ನಿಷ್ಠೆಯಿಂದ ನಿಭಾಯಿಸಿಕೊಂಡು ಬಂದಿರುವ ಶೋಭಾ ಕರಂದ್ಲಾಜೆ ನೂತನ ಕೇಂದ್ರ ಸಚಿವ ಸ್ಥಾನದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಜಿ. ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ ಶೆಟ್ಟಿ ಮತ್ತು ರೇಶ್ಮಾ ಉದಯ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಶೆಟ್ಟಿ ಗುರ್ಮೆ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಸುನಿತಾ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಮತ್ತು ಪ್ರಮೀಳಾ ಹರೀಶ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಸಹ ವಕ್ತಾರರಾದ ಶಿವಕುಮಾರ್ ಮತ್ತು ಗಿರೀಶ್ ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ರಮಾ ಶೆಟ್ಟಿ, ವಿದ್ಯಾ ಪೈ ಮತ್ತು ರಜನಿ ಹೆಬ್ಬಾರ್, ಕಾರ್ಯದರ್ಶಿಗಳಾದ ರೇಣುಕಾ, ನೀರಜ ಶೆಟ್ಟಿ ಮತ್ತು ಪೂರ್ಣಿಮಾ ರತ್ನಾಕರ್, ಕೋಶಾಧಿಕಾರಿ ಮಾಯಾ ಕಾಮತ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಸಂತಿ ಸತೀಶ್ ಪೂಜಾರಿ ಮತ್ತು ಸುಮಾ ಶೆಟ್ಟಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!