ಸುದ್ದಿಕಿರಣ ವರದಿ
ಸೋಮವಾರ, ಜುಲೈ 11
ಆರೂರು, ಉಪ್ಪೂರು ನೆರೆಪೀಡಿತ ಪ್ರದೇಶಗಳಿಗೆ ಸಚಿವೆ ಕರಂದ್ಲಾಜೆ ಭೇಟಿ
ಉಡುಪಿ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೋಡುಗಳು ತುಂಬಿ ಹರಿಯುತ್ತಿದ್ದು, ಹಲವಾರು ಭಾಗಗಳಲ್ಲಿ ಜಲ ಪ್ರವಾಹವುಂಟಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವುದಲ್ಲದೇ ಕೃಷಿಯೂ ಹಾನಿಗೊಳಗಾಗಿದೆ.
ಈ ಹಿನ್ನೆಲೆಯಲ್ಲಿ ಸೋಮವಾರ ಬ್ರಹ್ಮಾವರದ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟು ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಕೆ. ರಘುಪತಿ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ಉಪಾಧ್ಯಕ್ಷ ಗುರುರಾಜ್ ರಾವ್, ಉಡುಪಿ ಜಿಲ್ಲಾ ಗ್ರಾಮೀಣ ಪ್ರಕೋಷ್ಠಗಳ ಸಂಚಾಲಕ ರಾಜೀವ ಕುಲಾಲ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್ ಮತ್ತು ಸಚಿನ್ ಪೂಜಾರಿ ಮತ್ತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಹಾಗೂ ಆರೂರು ಗ್ರಾಮ ಪಂಚಾಯತ್ ಸದಸ್ಯರು ಇದ್ದರು.
ಉಪ್ಪೂರು ಭಾಗಕ್ಕೂ ಭೇಟಿ
ಇದೇ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾತಬೆಟ್ಟು ಪಿಳ್ಕಳ ಗರಡಿ ಬಳಿಯ ನೆರೆ ಪೀಡಿತ ಪ್ರದೇಶಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ರಘುಪತಿ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್ ಮತ್ತು ಸಚಿನ್ ಪೂಜಾರಿ, ಉಪ್ಪೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಧರಣೀಶ್, ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರಾದ ಸಾವಿತ್ರಮ್ಮ ಮತ್ತು ವಿದ್ಯಾ, ಮಾಜಿ ಅಧ್ಯಕ್ಷ ಪ್ರವೀಣ್ ಮತ್ತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್ ಇದ್ದರು