Monday, August 15, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ತುಳುನಾಡಿಗೆ ಆಗಮಿಸಿದ ಸಿನಿ ಶೆಟ್ಟಿ

ತುಳುನಾಡಿಗೆ ಆಗಮಿಸಿದ ಸಿನಿ ಶೆಟ್ಟಿ

ಸುದ್ದಿಕಿರಣ ವರದಿ
ಸೋಮವಾರ, ಜುಲೈ 18

ತುಳುನಾಡಿಗೆ ಆಗಮಿಸಿದ ಸಿನಿ ಶೆಟ್ಟಿ
ಮಂಗಳೂರು: ಪ್ರಸಕ್ತ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ, ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆ ಮೂಲದ ಸಿನಿ ಶೆಟ್ಟಿ ಸೋಮವಾರ ಮಂಗಳೂರಿಗೆ ಆಗಮಿಸಿದರು.

ಮಿಸ್ ಇಂಡಿಯಾ ಪ್ರಶಸ್ತಿ ಪಡೆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಅವರನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ತುಳುವಿನಲ್ಲೇ ಮಾತನಾಡಿದ ಅವರು, ನನ್ನನ್ನು ಪ್ರೋತ್ಸಾಹಿಸಿದ ಎಲ್ಲಾ ಕರಾವಳಿಯ ಜನತೆಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಮಿಸ್ ವಲ್ಡ್ ಕಿರೀಟ ಮುಡಿಗೇರಿಸುವ ಪ್ರಯತ್ನದಲ್ಲಿದ್ದೇನೆ. ನಿಮ್ಮೇಲ್ಲರ ಸಹಕಾರ ಇದೇ ರೀತಿ ಇರಲಿ ಎಂದರು.

ಕಾಪು ಬಳಿಯ ಮುಡುಂಬುವಿನ ತನ್ನ ಅಜ್ಜಿ ಮನೆಯಲ್ಲಿ ಕಳೆದ ನೆನಪುಗಳನ್ನು ಹಂಚಿಕೊಂಡ ಸಿನಿ ಶೆಟ್ಟಿ, ಮುಂದಿನ ದಿನಗಳಲ್ಲಿ ಬಾಲಿವುಡ್ ನಲ್ಲಿ ಉತ್ತಮ ಸಿನಿಮಾದಲ್ಲಿ ಅವಕಾಶ ಸಿಕ್ಕಿದರೆ ನಟಿಸುವುದಾಗಿ ತಿಳಿಸಿದರು.

21ರ ಹರೆಯದ ಸಿನಿ ಶೆಟ್ಟಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಪ್ರಸ್ತುತ ಅವರು ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ.
ಸಿನಿ ಶೆಟ್ಟಿ ಕಟೀಲು ದೇವಾಲಯಕ್ಕೂ ಭೇಟಿ ನೀಡಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!