Saturday, August 13, 2022
Home ಸಮಾಚಾರ ಅಪರಾಧ ಫಾಝಿಲ್ ಕೊಲೆ: ಆರು ಮಂದಿಯ ಬಂಧನ

ಫಾಝಿಲ್ ಕೊಲೆ: ಆರು ಮಂದಿಯ ಬಂಧನ

ಸುದ್ದಿಕಿರಣ ವರದಿ
ಮಂಗಳವಾರ, ಆಗಸ್ಟ್ 2

ಫಾಝಿಲ್ ಕೊಲೆ: ಆರು ಮಂದಿಯ ಬಂಧನ
ಮಂಗಳೂರು: ಸುರತ್ಕಲ್ ಸಮೀಪದ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತ ಅರೋಪಿಗಳನ್ನು ಸುಹಾಸ್ ಶೆಟ್ಟಿ, ಗಿರಿಧರ್, ಮೋಹನ್ ಯಾನೆ ನೇಪಾಳಿ ಮೋಹನ್, ಅಭಿಷೇಕ್, ಶ್ರೀನಿವಾಸ್ ಮತ್ತು ದೀಕ್ಷಿತ್ ಎಂದು ಗುರುತಿಸಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ ಸಂಖ್ಯೆ ಪತ್ತೆಹಚ್ಚಿ ಅದರ ಮಾಲಕ ಅಜಿತ್ ಕ್ರಾಸ್ತಾ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ.

ಅಜಿತ್ ಕ್ರಾಸ್ತಾ ನೀಡಿದ ಮಾಹಿತಿಯಂತೆ ಕಾರ್ಯಪ್ರವೃತ್ತರಾದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಶಿಕುಮಾರ್ ಹೇಳಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!