Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಗ್ರಾಮೀಣ ಆರ್ಥಿಕ ಬಲವರ್ಧನೆಗೆ ಧರ್ಮಸ್ಥಳ ಯೋಜನೆ ಪೂರಕ

ಗ್ರಾಮೀಣ ಆರ್ಥಿಕ ಬಲವರ್ಧನೆಗೆ ಧರ್ಮಸ್ಥಳ ಯೋಜನೆ ಪೂರಕ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಅಂಬಾಗಿಲು ವಲಯದ ಅಂಬಲಪಾಡಿ ಕಾರ್ಯಕ್ಷೇತ್ರದ ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಸೌಧ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ. ರಘುಪತಿ ಭಟ್, ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ಮೊತ್ತದ ಚೆಕ್ ವಿತರಿಸಿದರು.

ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಬಲವರ್ಧನೆಗೆ ಡಾ| ವೀರೇಂದ್ರ ಹೆಗ್ಗಡೆ ರೂಪಿಸಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೂರಕ ಎಂದರು.

ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಸ್ವಸಹಾಯ ಸಂಘದ ಸದಸ್ಯರಿಗೆ ಹಣ್ಣಿನ ಗಿಡ ವಿತರಿಸಿದರು.

ಅಂಬಲಪಾಡಿ ಗ್ರಾ. ಪಂ. ಸದಸ್ಯ ರಾಜೇಶ್ ಸುವರ್ಣ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಯೋಜನೆಯ ಉಚಿತ ಆರೋಗ್ಯ ರಕ್ಷಾ ಕಾರ್ಡು ವಿತರಿಸಿದರು.

ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಂಬಲಪಾಡಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್ ಅಂಬಲಪಾಡಿ ಅಭ್ಯಾಗತರಾಗಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಯೋಜನಾಧಿಕಾರಿ ರೋಹಿತ್ ಎಚ್. ಸ್ವಾಗತಿಸಿ, ಅಂಬಾಗಿಲು ವಲಯ ಮೇಲ್ವಿಚಾರಕ ಜಯಕರ್ ನಿರೂಪಿಸಿ, ವಂದಿಸಿದರು.

ಅಂಬಲಪಾಡಿ ಹಾಗೂ ನಿಟ್ಟೂರು ಸೇವಾ ಪ್ರತಿನಿಧಿ ಉಷಾ ಮತ್ತು ಗೀತಾ ಪಾಲನ್ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಇದ್ದರು

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!