Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಸಂಘಟನೆಗಳ ಪ್ರಮುಖರು ಎಚ್ಚರದಿಂದಿರಿ

ಸಂಘಟನೆಗಳ ಪ್ರಮುಖರು ಎಚ್ಚರದಿಂದಿರಿ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 29

ಸಂಘಟನೆಗಳ ಪ್ರಮುಖರು ಎಚ್ಚರದಿಂದಿರಿ
ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರು ಎಚ್ಚರದಿಂದಿರುವಂತೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನಿಸಲಾಗಿದೆ.

ಪ್ರವೀಣ್ ಹತ್ಯೆಯಿಂದ ಇಡೀ ಕರಾವಳಿ ಜನತೆ ಬೆಚ್ಚಿಬಿದ್ದಿದ್ದು, ಇದೀಗ ಮತ್ತೊಂದು ಕೊಲೆ ನಡೆದಿರುವುದರಿಂದ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಯ ಪ್ರಮುಖರು ಎಚ್ಚರದಿಂದಿರುವಂತೆ ಮತ್ತು ರಾತ್ರಿ ವೇಳೆಯಲ್ಲಿ ಒಬ್ಬಂಟಿಯಾಗಿ ಸುತ್ತಾಡದಂತೆ ಸಲಹೆ ನೀಡಲಾಗಿದೆ.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗ ಸೇರಿದಂತೆ ಸೂಕ್ಷ್ಮ ಪ್ರದೇಶ, ಚೆಕ್ ಪೋಸ್ಟ್ ಗಳಲ್ಲಿ ಬೀಟ್ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಯಾವುದೇ ಮಾಹಿತಿ ಇದ್ದರೂ ಪೊಲೀಸ್ ಇಲಾಖೆಗೆ ನೀಡುವಂತೆ ಎಸ್.ಪಿ ಎನ್. ವಿಷ್ಣುವರ್ಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!