ಬ್ರಹ್ಮಾವರ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪ್ಪೂರು ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಂಗಾರಕ ಸಂಕಷ್ಟ ಹರಚತುರ್ಥಿ ದಿನವಾದ ಮಂಗಳವಾರ ಉಪ್ಪೂರು ( ಕೆ.ಜಿ ರೋಡ್ ಬಳಿ) ಮಹತೋಭಾರ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ವ್ಯಾಪ್ತಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.