Saturday, August 13, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಶ್ರೀಲಂಕಾ ಪ್ರಧಾನಿ ವಿಕ್ರಂ ಸಿಂಘೆ ರಾಜೀನಾಮೆ

ಶ್ರೀಲಂಕಾ ಪ್ರಧಾನಿ ವಿಕ್ರಂ ಸಿಂಘೆ ರಾಜೀನಾಮೆ

ಸುದ್ದಿಕಿರಣ ವರದಿ
ಶನಿವಾರ, ಜುಲೈ 9

ಶ್ರೀಲಂಕಾ ಪ್ರಧಾನಿ ವಿಕ್ರಂ ಸಿಂಘೆ ರಾಜೀನಾಮೆ
ಸಿಲೋನ್: ಶ್ರೀಲಂಕಾದಲ್ಲಿ ಪ್ರತಿಭಟನಾ ನಿರತರು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವಂತೆಯೇ ಪ್ರಧಾನಿ ರಾನಿಲ್​ ವಿಕ್ರಮಸಿಂಘೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರೊಂದಿಗೆ ಸಚಿವ ಬಂಡುಲ ಗುಣವರ್ಧನ್ ಕೂಡಾ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ತನ್ನ ರಾಜೀನಾಮೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ವಿಕ್ರಮಸಿಂಘೆ, ಶ್ರೀಲಂಕಾ ಜನರ ಸುರಕ್ಷತೆ ಮೊದಲ ಆದ್ಯತೆಯಾಗಿದೆ. ಪಕ್ಷ ನಾಯಕರ ಶಿಫಾರಸು ಸ್ವೀಕರಿಸಿ ಮತ್ತು ಎಲ್ಲ ಪಕ್ಷಗಳೂ ಸೇರಿ ಹೊಸ ಸರ್ಕಾರಿ ರಚನೆ ಮಾಡಲು ಅನುವು ಮಾಡಿಕೊಡಲು ನಾನು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದವರು ತಿಳಿಸಿದ್ದಾರೆ.

ಎಲ್ಲ ನಾಗರಿಕರ ಸುರಕ್ಷತೆ ಮತ್ತು ಸರ್ಕಾರ ಮುಂದುವರಿಯುವ ನಿಟ್ಟಿನಲ್ಲಿ ತಾನು ಈ ನಿರ್ಧಾರ ಕೈಗೊಂಡಿದ್ದು, ಜನರ ರಕ್ಷಣೆ ಮುಖ್ಯ ಕರ್ತವ್ಯವಾಗಿದೆ ಎಂದಿದ್ದಾರೆ.

ರಾಜೀನಾಮೆ ನೀಡುವುದಕ್ಕೂ ಮುನ್ನ ಅವರು ಸಂಸದರೊಂದಿಗೆ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

ದೇಶದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಅರಿತ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಎಲ್ಲ ಪಕ್ಷಗಳ ಮುಖಂಡರ ತುರ್ತು ಸಭೆ ಕರೆದಿದ್ದರು. ಸದರ ಬೆನ್ನಲ್ಲೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!