Thursday, December 2, 2021
Home ಸಮಾಚಾರ ರಾಜ್ಯ ವಾರ್ತೆ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಮುಂದೂಡಿಕೆ

ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಮುಂದೂಡಿಕೆ

ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಮುಂದೂಡಿಕೆ

ಉಡುಪಿ, ನ. 10 (ಸುದ್ದಿಕಿರಣ ವರದಿ): ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಈ ತಿಂಗಳ 15ರಂದು ನಡೆಯಬೇಕಿದ್ದ ರಾಜ್ಯ ಸಹಕಾರಿ ಸಪ್ತಾಹವನ್ನು ಮುಂದೂಡಲಾಗಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಸಚಿವ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ನವೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ ಸಹಕಾರಿ ಸಪ್ತಾಹವನ್ನು ಜನವರಿ ತಿಂಗಳಲ್ಲಿ ನಡೆಸಲಾಗುವುದು. ಉಡುಪಿಯಲ್ಲಿ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮ ನಿಗದಿಯಾಗಿತ್ತು.

ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ಕಾರ್ಯಾಕ್ರಮ ಮುಂದೂಡುತ್ತಿದ್ದೇವೆ ಎಂದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ದ.ಕ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ, ದ.ಕ ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಡಾ| ದೇವಿಪ್ರಸಾದ ಶೆಟ್ಟಿ, ಎಸ್. ರಾಜು ಪೂಜಾರಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!