Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸ್ಟಿಕರ್, ಭಿತ್ತಿಪತ್ರ ಬಿಡುಗಡೆ

ಸ್ಟಿಕರ್, ಭಿತ್ತಿಪತ್ರ ಬಿಡುಗಡೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಉಡುಪಿ, ಜು. 10: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ವಿರುದ್ಧ ನಡೆಯಲಿರುವ ರಾಜ್ಯವ್ಯಾಪಿ ಪ್ರತಿಭಟನೆ ಪ್ರಯುಕ್ತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಹೊರತಂದಿರುವ ಫ್ಲೆಕ್ಸ್ ಹಾಗೂ ಸ್ಟಿಕರ್ಸ್ ಮತ್ತು ಭಿತ್ತಿಪತ್ರಗಳನ್ನು ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತನ್ನದೇ ವಾಹನಕ್ಕೆ ಸ್ಟಿಕ್ಕರ್ ಅಂಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೊ ಫ್ಲೆಕ್ಸ್ ಬಿಡುಗಡೆ ಮಾಡಿದರು. ಕೆಪಿಸಿಸಿ ವೀಕ್ಷಕ ಹರೀಶ್ ಕಿಣಿ, ರಾಜ್ಯ ಹಿಂದುಳಿದ ವರ್ಗಗಳ ಘಟಕ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿತೇಶ್, ಕೀರ್ತಿ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಹೆಬ್ಬಾರ್, ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷೆ ಅನಿತಾ ಡಿ’ಸೋಜ, ಹೆಬ್ರಿ ಬ್ಲಾಕ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಸುಗುಣಾ ಪೂಜಾರಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!