ಕಾರ್ಕಳ ವಕೀಲರ ಸಂಘದ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಶೆಟ್ಟಿ ಆಯ್ಕೆ
(ಸುದ್ದಿಕಿರಣ ವರದಿ)
ಕಾರ್ಕಳ: ಇಲ್ಲಿನ ವಕೀಲರ ಸಂಘದ ಅಧ್ಯಕ್ಷರಾಗಿ ಎಸ್ಕೆಎಸ್ ಲಾ ಛೇಂಬರ್ ನ ಸುನಿಲ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಈಚೆಗೆ ನಡೆದ ವಕೀಲರ ಸಂಘದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು. ಹಿರಿಯ ವಕೀಲ ಕೆ. ನವೀನ್ ಚಂದ್ರ ಹೆಗ್ಡೆ ಚುನಾವಣಾಧಿಕಾರಿಯಾಗಿದ್ದರು.
ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್ ಪುನರಾಯ್ಕೆಯಾದರು.
ಕಾರ್ಕಳ ವಕೀಲರ ಸಂಘದ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಸುನಿಲ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ, ಜನತಾದಳ ಕಾರ್ಕಳ ಘಟಕ ಅಧ್ಯಕ್ಷರಾಗಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾಗಿ, ಕಾರ್ಕಳ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.