ಸಚಿವ ಸುನಿಲ್ ಕೃಷ್ಣಮಠಕ್ಕೆ ಭೇಟಿ
(ಸುದ್ದಿಕಿರಣ ವರದಿ)
ಉಡುಪಿ: ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆದು ಪ್ರಮಾಣವಚನ ಸ್ವೀಕರಿಸಿ, ಮೊದಲ ಬಾರಿಗೆ ಉಡುಪಿ ಜಿಲ್ಲೆಗಾಗಮಿಸಿದ ಸಂಪುಟ ದರ್ಜೆ ಸಚಿವ ವಿ. ಸುನಿಲ್ ಕುಮಾರ್ ಶುಕ್ರವಾರ ಶ್ರೀಕೃಷ್ಣಮಠಕ್ಕೆ ಸಕುಟುಂಬಿಕರಾಗಿ ಭೇಟಿ ನೀಡಿದರು.
ಕನಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣ ದರುಶನ ಪಡೆದು, ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಬಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಪಕ್ಷ ಪ್ರಮುಖರಾದ ಸುವರ್ಧನ ನಾಯಕ್, ಶ್ರೀಶ ನಾಯಕ್ ಪೆರ್ಣಂಕಿಲ, ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಬಳಗದ ವೈ. ಎನ್. ರಾಮಚಂದ್ರ ರಾವ್, ಪ್ರದೀಪ್ ರಾವ್ ಮೊದಲಾದವರಿದ್ದರು.