Monday, August 15, 2022
Home ಕ್ರೀಡೆ ತಾಲೂಕು ಮಟ್ಟದ ಚೆಸ್ ಪಂದ್ಯಾಟ

ತಾಲೂಕು ಮಟ್ಟದ ಚೆಸ್ ಪಂದ್ಯಾಟ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 19

ತಾಲೂಕು ಮಟ್ಟದ ಚೆಸ್ ಪಂದ್ಯಾಟ
ಕುಂದಾಪುರ: ಜಾಣ ನಡೆಯ ಆಟವನ್ನು ಬುದ್ಧಿವಂತಿಕೆಯಿಂದ ಆಡಿ, ಜೊತೆಗೆ ಆಟದ ನಡೆ ಆಸ್ವಾದಿಸಿ. ಚದುರಂಗ ಆಟದ ಮೂಲಕ ನಿಮ್ಮ ಕಲಿಕೆಯೂ ಸುಗಮವಾಗಲಿ ಎಂದು ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಹಾಗೂ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಚೆಸ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ದೀಪ ಬೆಳಗುವ ಮೂಲಕ ಉದ್ಘಾಟನೆಗೊಂಡ ಪಂದ್ಯಾಟವನ್ನು ಕಪ್ಪು ಬಿಳಿ ಮಣೆಯ ಮೇಲಿನ ಕಾಯಿಗಳನ್ನು ನಡೆಸುವ ಮೂಲಕ ಸಭಾಧ್ಯಕ್ಷರು ಹಾಗೂ ಚೆಸ್ ಅಸೋಸಿಯೇಶನ್ ಸದಸ್ಯ ಉಮಾನಾಥ ಕಾಪು ಪಂದ್ಯಾಟಕ್ಕೆ ಚಾಲನೆ ನೀಡಿದರು.

ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ಹಮ್ಮು ನಾಯಕ್ ಪಂದ್ಯಾಟ ಬಗ್ಗೆ ತಿಳಿಸಿದರು.

ತಾಲೂಕು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಹಾಗೂ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕುಸುಮಾಕರ ಶೆಟ್ಟಿ, ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ನಾರಾಯಣ ಶೆಟ್ಟಿ, ಸಂಸ್ಥೆ ಪ್ರಾಂಶುಪಾಲೆ ಚಿಂತನಾ ರಾಜೇಶ್ ಇದ್ದರು.

30 ಶಾಲೆಗಳಿಂದ ಆಗಮಿಸಿದ ಚೆಸ್ ಕ್ರೀಡಾಪಟುಗಳೊಂದಿಗೆ ಕ್ರೀಡಾಧಿಕಾರಿಗಳು, ಸಂಸ್ಥೆ ಉಪಪ್ರಾಂಶುಪಾಲೆ ಹಾಗೂ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ. ಭಟ್, ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿ, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಹಾಗೂ ಎಲ್ಲಾ ಶಿಕ್ಷಕರು ಇದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಶ್ ಪ್ರಭು, ರಾಜೇಂದ್ರ ಶೆಟ್ಟಿ ಮತ್ತು ವೀರೇಂದ್ರ ನಾಯಕ್ ಕಾರ್ಯಕ್ರಮ ಸಂಯೋಜಿಸಿದ್ದರು.

ಶಿಕ್ಷಕರಾದ ಸ್ವಪ್ನ ಸತೀಶ್ ನಿರೂಪಿಸಿ, ರಾಜೇಂದ್ರ ಶೆಟ್ಟಿ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!