Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೊಟ್

ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೊಟ್

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
*******************************

(ಸುದ್ದಿಕಿರಣ ವರದಿ)

ನವದೆಹಲಿ, ಜು. 6: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ.

ಪ್ರಸ್ತುತದ ರಾಜ್ಯಪಾಲ ವಜುಭಾಯಿವಾಲಾ ಅವಧಿ ಪೂರ್ಣಗೊಂಡಿದ್ದು, ಅವರ ಸ್ಥಾನಕ್ಕೆ ತಾವರ್ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ ಚರ್ಚೆ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಿದ್ದಿದೆ.

ತಾವರ್ ಚಂದ್ 3 ಬಾರಿ ಮಧ್ಯಪ್ರದೇಶ ಶಾಸಕರಾಗಿ, 4 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!