Thursday, July 7, 2022
Home ಸಮಾಚಾರ ಅಪರಾಧ ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಸುದ್ದಿಕಿರಣ ವರದಿ
ಶುಕ್ರವಾರ, ಮಾರ್ಚ್ 4
ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಕಾಪು: ಟಿಪ್ಪರೊಂದು ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇನ್ನಂಜೆ‌–ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ.
ಸಾವನ್ನಪ್ಪಿದ ಬೈಕ್ ಸವಾರ ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನಿಲ್ ಕುಮಾರ್ (31) ಎಂದು ಗುರುತಿಸಲಾಗಿದೆ.
ಇನ್ನಂಜೆ‌- ಬಂಟಕಲ್ಲು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಹುಗುಜ್ಜಾಗಿದ್ದು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!