Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮುಖ್ಯಮಂತ್ರಿಗೆ ಸಾಂಪ್ರದಾಯಿಕ ಸ್ವಾಗತ

ಮುಖ್ಯಮಂತ್ರಿಗೆ ಸಾಂಪ್ರದಾಯಿಕ ಸ್ವಾಗತ

ಮುಖ್ಯಮಂತ್ರಿಗೆ ಸಾಂಪ್ರದಾಯಿಕ ಸ್ವಾಗತ

(ಸುದ್ದಿಕಿರಣ ವರದಿ)
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳ ಎರಡು ದಿನಗಳವಧಿಯ ಭೇಟಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಬೊಮ್ಮಾಯಿ ಅವರನ್ನು ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಾರ್ದಿಕ ಸ್ವಾಗತ ಕೋರಲಾಯಿತು.

ಸುಮಂಗಲೆಯರು ಸಿಎಂ ಬೊಮ್ಮಾಯಿ ಅವರಿಗೆ ತಿಲಕವಿಟ್ಟು, ಆರತಿ ಬೆಳಗಿ ಬರಮಾಡಿಕೊಂಡರು.

ದ.ಕ. ಮತ್ತು ಉಡುಪಿ ಜಿಲ್ಲೆಗಳ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ. 12 ಮತ್ತು 13ರಂದು ಪ್ರವಾಸ ಕೈಗೊಂಡಿದ್ದು, ಗುರುವಾರ ಬೆಳಿಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸುಧಾಕರ್, ಶಾಸಕರಾದ ಯು. ಟಿ. ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ ಮತ್ತು ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!