ಸುದ್ದಿಕಿರಣ ವರದಿ
ಭಾನುವಾರ, ಜುಲೈ 17
ಡಾ| ಹೆಗ್ಗಡೆಗೆ ಬಿಜೆಪಿ ಅಭಿನಂದನೆ
ಉಡುಪಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಪಕ್ಷ ಪ್ರಮುಖರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಮತ್ತು ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಉಡುಪಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಾಗೂ ನಗರಸಭಾ ಸದಸ್ಯರು ಇದ್ದರು.