Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಉಡುಪಿ ಡಿಸಿ ವರ್ಗ; ಕೂರ್ಮರಾವ್ ನೂತನ ಜಿಲ್ಲಾಧಿಕಾರಿ

ಉಡುಪಿ ಡಿಸಿ ವರ್ಗ; ಕೂರ್ಮರಾವ್ ನೂತನ ಜಿಲ್ಲಾಧಿಕಾರಿ

ಉಡುಪಿ ಡಿಸಿ ಜಗದೀಶ್‌ ವರ್ಗ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್‌ ನೇಮಕ

(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ.

ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮರಾವ್‌ ಅವರನ್ನು ನೇಮಕ ಮಾಡಲಾಗಿದೆ.

ಜಿ. ಜಗದೀಶ್‌ ಅವರನ್ನು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಲಾಗಿದೆ.

2019ರ ಆ. 20ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!