Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊರೊನಾದಿಂದ ಮೃತಪಟ್ಟ ನೌಕರನ ಮನೆಗೆ ಡಿ.ಎಚ್.ಓ ಭೇಟಿ

ಕೊರೊನಾದಿಂದ ಮೃತಪಟ್ಟ ನೌಕರನ ಮನೆಗೆ ಡಿ.ಎಚ್.ಓ ಭೇಟಿ

ಕಾರ್ಕಳ: ಕೊರೊನಾದಿಂದ ಮೃತಪಟ್ಟ ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಗ್ರೂಪ್ ಡಿ ನೌಕರನ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಈಚೆಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಹಾಗೂ ವಿಮಾ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!