Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸಚಿವೆ ಶೋಭಾ ಕರಂದ್ಲಾಜೆ ಕೃಷ್ಣಮಠ ಭೇಟಿ

ಸಚಿವೆ ಶೋಭಾ ಕರಂದ್ಲಾಜೆ ಕೃಷ್ಣಮಠ ಭೇಟಿ

ಸಚಿವೆ ಶೋಭಾ ಕರಂದ್ಲಾಜೆ ಕೃಷ್ಣಮಠ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನವಗ್ರಹ ಕಿಂಡಿ ಮೂಲಕ ಕೃಷ್ಣ ದರ್ಶನ ಮಾಡಿದರು.

ಅದಕ್ಕೂ ಮುನ್ನ ಅನಂತೇಶ್ವರ, ಚಂದ್ರೇಶ್ವರ ದೇವಳಕ್ಕೂ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಸಚಿವೆಯಾಗಿ ಮೊತ್ತ ಮೊದಲ ಬಾರಿಗೆ ಉಡುಪಿಗಾಗಮಿಸಿರುವ ಶೋಭಾ ಕರಂದ್ಲಾಜೆ ಅವರನ್ನು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸನ್ಮಾನಿಸಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್ ಸಚಿವೆ ಶೋಭಾ ಅವರನ್ನು ಬರಮಾಡಿಕೊಂಡರು. ಶ್ರೀಕೃಷ್ಣ ಸೇವಾ ಬಳಗದ ವೈ. ಎನ್. ರಾಮಚಂದ್ರ ರಾವ್, ಪ್ರದೀಪ್ ರಾವ್ ಇದ್ದರು.

ಶಾಸಕ ರಘುಪತಿ ಭಟ್, ವಿಧಾನ ಪರಿಷತ್ ಸದಸ್ಯ ಮುನಿರಾಜು, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಮೊದಲಾದವರಿದ್ದರು.

ಕಾಣಿಯೂರು ಮಠ ಭೇಟಿ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭ ಕಾಣಿಯೂರು ಮಠಕ್ಕೆ ಭೇಟಿ ನೀಡಿದರು.

ಕಾಣಿಯೂರು ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರೊಂದಿಗೆ ಸಮಾಲೋಚನೆ ನಡೆಸಿ, ಶ್ರೀಗಳಿಂದ ಆಶೀರ್ವಾದ ಪಡೆದರು.

ಅದಮಾರು ಮಠ ಭೇಟಿ
ಬಳಿಕ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರೊಂದಿಗೆ ಸಮಾಲೋಚನೆ ನಡೆಸಿ, ಆಶೀರ್ವಾದ ಪಡೆದರು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಗೌರವಿಸಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ. ಶ್ರೀಶ ಭಟ್ ಕಡೆಕಾರ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!