Thursday, July 7, 2022
Home ಸಮಾಚಾರ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ರಸ್ತೆ ನಡುವಿನ ಚರಂಡಿ!

ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ರಸ್ತೆ ನಡುವಿನ ಚರಂಡಿ!

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

ಮಣಿಪಾಲ: ಜನನಿಬಿಡ ಪ್ರದೇಶವಾದ ಮಣಿಪಾಲದ ಪ್ರೆಸ್ ಕಡೆಗೆ ತಿರುಗುವ ರಸ್ತೆಯ ಮಧ್ಯಭಾಗದಲ್ಲಿ ಮಳೆಗಾಲದ ನೀರು ಹೋಗುವ ಚರಂಡಿಯನ್ನು ಅವೈಜ್ಞಾನಿಕವಾಗಿ ನಗರಸಭೆ ನಿರ್ಮಿಸಿದೆ. ಅದರಿಂದ ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ.

ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಸ್ವಲ್ಪ ಪಕ್ಕಕ್ಕೆ ಸರಿಸಿ ಕಾಮಗಾರಿ ನಡೆಸಿದಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಇಲ್ಲವಾದಲ್ಲಿ ದಿನನಿತ್ಯ ಅಪಘಾತ ಸಂಭವಿಸುವ ಸಾಧ್ಯತೆ ಇದೆ.

ಆದ್ದರಿಂದ ಅದನ್ನು ಸರಿಪಡಿಸಿ ಸಮರ್ಪಕ ಚರಂಡಿ, ರಸ್ತೆ ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!