Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
ಉಡುಪಿ: ಸಂವಿಧಾನದ ಆಶಯ ಮತ್ತು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಹಾಗೂ ಹಿರಿಯ ಸಾಹಿತಿಗಳಿಗೆ ವಿರುದ್ಧವಾಗಿ ಪಠ್ಯ ಪುಸ್ತಕ ರಚಿಸಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ವಜಾಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾ ಘಟಕ ಬುಧವಾರ ಜಿಲ್ಲಾಧಿಕಾರಿ ಕೂರ್ಮರಾವ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005ರ ಅಡಿಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಪ್ರಾದೇಶಿಕತೆ ಒಳಗೊಳ್ಳುವ ಮೂಲಕ ರಚಿಸಿದ ಪಠ್ಯಗಳನ್ನು ಮಕ್ಕಳು ಕಲಿಯುತ್ತಿದ್ದರು.

ಆದರೆ, ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿದ ಪಠ್ಯದಲ್ಲಿ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎಂಬ ಸಾಲನ್ನು ತೆಗೆದು ಅವರನ್ನು ಅವಮಾನಿಸಲಾಗಿದೆ.

ಬಸವಣ್ಣ, ರಾಷ್ಟ್ರಕವಿ ಕುವೆಂಪು, ನಾರಾಯಣ ಗುರು, ಟಿಪ್ಪು ಸುಲ್ತಾನ್, ಸಾವಿತ್ರಿಬಾಯಿ ಫುಲೆ ಸೇರಿದಂತೆ ಹಲವು ಇತಿಹಾಸವನ್ನು ಪಠ್ಯ ಪುಸ್ತಕದಲ್ಲಿ ತಿರುಚಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷೆ ಸುನೀತಾ ಆದಿದ್ರಾವಿಡ, ಪ್ರಮುಖರಾದ ಮಂಜುಳಾ, ನಯನ, ಗಾಯತ್ರಿ, ರಾಜೇಶ್ವರಿ, ವಸಂತಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!